×
Ad

ನಾಳೆ (ಜು. 26) ಕಲಬುರಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್

Update: 2023-07-25 22:36 IST

ಬಿ.ಫೌಝಿಯಾ ತರನ್ನುಮ್- ಜಿಲ್ಲಾಧಿಕಾರಿ

ಕಲಬುರಗಿ: ಜಿಲ್ಲೆಯಾದ್ಯಂತ ಜುಲೈ 26 ರಂದು ಭಾರಿ ಮಳೆ (ರೆಡ್‌ ಅಲರ್ಟ್) ಹಿನ್ನೆಲೆ ಬುಧವಾರ ಶಾಲೆ,‌ ಅಂಗನವಾಡಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದೆ. ಹವಮಾನ ಇಲಾಖೆ ವರದಿಯಂತೆ 26 ರಂದು ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ವರದಿ ನೀಡಿದೆ. ಮುಂಜಾಗ್ರತೆ ಕ್ರಮವಾಗಿ ರೆಡ್ ಆಲರ್ಟ್ ಘೋಷಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News