×
Ad

ನಾಳೆ (ಸೆ.29) ʼಕರ್ನಾಟಕ ಬಂದ್‌': ಬೆಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Update: 2023-09-28 18:59 IST

ಬೆಂಗಳೂರು, ಸೆ.28: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಸೆ.29ರಂದು ಕರ್ನಾಟಕ ಬಂದ್ ಘೋಷಿಸಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರುಗಳಿಗೆ ಶಾಲಾ-ಕಾಲೇಜಿಗೆ ಬರಲು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಬಹುದು. ಇದನ್ನು ಮನಗಂಡು ಹಾಗೂ ಮುಂಜಾಗ್ರಣಾ ಕ್ರಮವಾಗಿ ಸೆ.29ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶದಲ್ಲಿ ತಿಳಿಸಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News