×
Ad

ನಾಳೆ (ಸೆ.29) ಕರ್ನಾಟಕ ಬಂದ್‌: ಬೆಂಗಳೂರು ನಗರದಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ

Update: 2023-09-28 17:00 IST

ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರು: ನಾಳೆ (ಸೆ.29) ರಂದು ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆಕೊಟ್ಟಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಅದರಂತೆ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ ಮಾಡಲಾಗಿದ್ದು ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. 

ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುವಂತಿಲ್ಲ, ಸಾರ್ವಜನಿಕ ಜೀವನಕ್ಕೆ ಸಮಸ್ಯೆ ಉಂಟು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಸಹ ಇದೆ. ಬಂದ್ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾದರೆ ಇದಕ್ಕೆ ಸಂಘಟನೆಗಾರರೇ ಹೊಣೆಗಾರರಾಗುತ್ತೀರಾ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದರೆ ಸಮಸ್ಯೆ ಇಲ್ಲ. ಅದನ್ನು ಬಿಟ್ಟು ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದರು.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News