×
Ad

ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ: ಸಿಎಂ ಸಿದ್ದರಾಮಯ್ಯ

"ಹಂತ-ಹಂತವಾಗಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ"

Update: 2025-12-11 20:32 IST

ಬೆಳಗಾವಿ(ಸುವರ್ಣವಿಧಾನಸೌಧ): ಆರ್ಥಿಕ ಇಲಾಖೆಯ ಅನುಮತಿ ಪಡೆದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರದ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಆ ಪೈಕಿ ವಿವಿಧ ನಿಗಮ ಮಂಡಳಿಗಳಲ್ಲಿ 1,01,420 ಹುದ್ದೆಗಳು, ವಿಶ್ವ ವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,16,097 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News