×
Ad

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ದುರಂತ : 14 ವರ್ಷದ ವಿದ್ಯಾರ್ಥಿನಿ ಸಹಿತ 10 ಮಂದಿ ಮೃತ್ಯು

Update: 2025-06-04 18:36 IST

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ 14 ವರ್ಷದ ವಿದ್ಯಾರ್ಥಿನಿ ಸಹಿತ 10 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಮಂದಿ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ 4 ಮಂದಿ ಮೃತಟ್ಟಿದ್ದಾರೆ ಎಂದು ತಿಳಿದು ಬಂದಿದೆ.

18 ವರ್ಷಗಳ ಬಳಿಕ ಆರ್​​ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆಗೆ ಕಾರ್ಯಕ್ರಮ ನಿಗಧಿಯಾಗಿತ್ತು. ಈ ಹಿನ್ನಲೆಯಲ್ಲಿ ಆರ್‌ಸಿಬಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿತ್ತು.

ಟ್ರೋಫಿ ಗೆದ್ದ ತಂಡವನ್ನು ನೋಡಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಆಗಮಿಸುತ್ತಿದ್ದು, ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ.

ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News