×
Ad

12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ, 66 ಮಂದಿ ಐಎಎಸ್ ಅಧಿಕಾರಿಗಳಿಗೆ ಮುಂಭಡ್ತಿ

Update: 2025-12-31 22:01 IST

ಬೆಂಗಳೂರು: ಐದು ಮಂದಿ ಜಿಲ್ಲಾಧಿಕಾರಿಗಳು ಸೇರಿದಂತೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿರುವ ರಾಜ್ಯ ಸರಕಾರ, 66 ಮಂದಿ ಐಎಎಸ್ ಅಧಿಕಾರಿಗಳಿಗೆ ಮುಂಭಡ್ತಿ ನೀಡಿದ್ದು, ಈ ಪೈಕಿ ಕೆಲ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದೆ.

ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಾಟೇರಿಯಾ, ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ದೀಪಕ್ ಜೈನ್, ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ. ಏಕ್‍ರೂಪ್ ಕೌರ್, ಬಿಎಂಆರ್‍ಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್ ಜೆ. ಸೇರಿದಂತೆ 66 ಮಂದಿ ಐಎಎಸ್ ಅಧಿಕಾರಿ ಮುಂಭಡ್ತಿ ನೀಡಲಾಗಿದೆ.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮಹ್ಸಿನ್ ಅವರಿಗೆ ಮುಂಬಡ್ತಿ ನೀಡಿ, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಆರೋಗ್ಯ ಇಲಾಖೆಯ ಆಯುಕ್ತ ಶಿವಕುಮಾರ್ ಅವರನ್ನು ಮುಂಬಡ್ತಿ ನೀಡಿ, ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಐದು ಜಿಲ್ಲಾಧಿಕಾರಿಗಳ ವರ್ಗಾವಣೆ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರನ್ನು ಬೆಂಗಳೂರಿನ ಕಂದಾಯ ವಿಭಾಗದ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ನಾಗರಾಜ ಎನ್.ಎಂ. ಅವರನ್ನು ವರ್ಗಾಯಿಸಲಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರನ್ನು ಪಶುಸಂಗೋಪನಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರನ್ನು ತುಮಕೂರು ಜಿ.ಪಂ ಸಿಇಒ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ರವೀಂದ್ರ ಪಿ.ಎನ್. ಅವರನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದ್ದು, ತುಮಕೂರು ಜಿ.ಪಂ ಸಿಇಒ ಆಗಿದ್ದ ಪ್ರಭು ಜಿ. ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಪಶುಸಂಗೋಪನಾ ಇಲಾಖೆಯ ಆಯುಕ್ತೆ ಶ್ರೀರೂಪಾ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಕೃಷಿ ಇಲಾಖೆಯ ಆಯುಕ್ತ ಪಾಟೀಲ್ ಯಳಗೌಡ ಶಿವನಗೌಡ ಅವರನ್ನು ತೋಟಗಾರಿಕಾ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News