×
Ad

ಎಂಟು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2024-07-06 21:54 IST

ಬೆಂಗಳೂರು : ರಾಜ್ಯ ಸರಕಾರವು ಎಂಟು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯಕಾರಿ ನಿರ್ದೇಶಕ ಯಶವಂತ್ ವಿ.ಗುರುಕರ್ ಅವರನ್ನು ರಾಮನಗರ ಜಿಲ್ಲಾಧಿಕಾರಿಯಾಗಿ, ಬಿಬಿಎಂಪಿ ವಿಶೇಷ ಆಯುಕ್ತ(ಆಡಳಿತ) ಡಾ.ಹರೀಶ್ ಕುಮಾರ್ ಕೆ. ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತ(ಘನ ತ್ಯಾಜ್ಯ ನಿರ್ವಹಣೆ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಅರ್ಚನಾ ಎಂ.ಎಸ್. ಅವರನ್ನು ಬಿಎಂಟಿಸಿ ನಿರ್ದೇಶಕ(ಭದ್ರತೆ ಹಾಗೂ ವಿಚಕ್ಷಣ), ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ಬಿಬಿಎಂಪಿ(ಆಡಳಿತ) ವಿಶೇಷ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಆರ್ಥಿಕ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರನ್ನು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ(ಬಜೆಟ್ ಮತ್ತು ಸಂಪನ್ಮೂಲ)ಯಾಗಿ, ಮಡಿಕೇರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ತಿನ್ ನೇಗಿ ಅವರನ್ನು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಮಗದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಮೋನಾ ರಾವುತ್ ಅವರನ್ನು ಚಾಮರಾಜನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಚಾಮರಾಜನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರನ್ನು ಮಡಿಕೇರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News