×
Ad

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2026-06-30 19:08 IST

ಬೆಂಗಳೂರು : ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಕರ್ನಾಟಕ ಗಣಿಗಾರಿಕೆ ಪರಿಸರ ಮರುಸ್ಥಾಪನಾ ನಿಗಮ(ಕೆಎಂಇಆರ್‍ಸಿ)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಅಭಿರಾಮ್ ಜಿ. ಶಂಕರ್ ಅವರನ್ನು ನೇಮಕ ಮಾಡಲಾಗಿದೆ. ಅಭಿರಾಮ್ ಜಿ. ಶಂಕರ್ ಅವರನ್ನು ಜೂ.30ರಂದು ವಯೋನಿವೃತ್ತಿ ಹೊಂದುತ್ತಿರುವ ಐಎಫ್‍ಎಸ್ ಅಧಿಕಾರಿ ಡಾ. ಸಂಜಯ್ ಎಸ್.ಬಿಜ್ಜೂರ್ ಅವರಿಂದ ತೆರವಾಗುತ್ತಿರುವ ಸ್ಥಾನಕ್ಕೆ ನಿಯೋಜಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ(ಐಟಿ-ಬಿಟಿ) ಇಲಾಖೆಯ ನಿರ್ದೇಶಕರನ್ನಾಗಿ ಡಾ.ಅವಿನಾಶ್ ಮೆನನ್ ಅವರನ್ನು ನೇಮಿಸಿದ್ದು, ಇದರ ಜೊತೆಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ವಹಿಸಲಾಗಿದೆ.

ಬೆಂಗಳೂರಿನ ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರನ್ನಾಗಿ ಯೋಗೀಶ್ ಎ. ಎಂ. ಅವರನ್ನು ನೇಮಿಸಿದ್ದು, ಈ ವರೆಗೆ ಈ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ಹೊಂದಿದ್ದ ಐಎಎಸ್ ಅಧಿಕಾರಿ ಪ್ರಸನ್ನ ಎಚ್. ಅವರನ್ನು ಆ ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದೆ.

ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತರನ್ನಾಗಿ ದಿವ್ಯಾ ಪ್ರಭು ಜಿ.ಆರ್.ಜೆ. ಅವರನ್ನು ನೇಮಿಸಿದ್ದು, ಈ ವರೆಗೆ ಈ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದ ಡಾ.ಅರುಂಧತಿ ಚಂದ್ರಶೇಖರ್‍ರನ್ನು ತಕ್ಷಣದಿಂದಲೇ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News