ಐಎಎಸ್ ಹಾಗೂ ಐಎಫ್‍ಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಎಎಸ್ ಹಾಗೂ ಓರ್ವ ಐಎಫ್‍ಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಐಎಎಸ್: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ದಿಗ್ವಿಜಯ ಬೊಡ್ಕೆ ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಯಾಗಿ, ರಾಜ್ಯ ಲೋಕಸೇವಾ ಆಯೋಗದ ಜಂಟಿ ಪರೀಕ್ಷಾ ನಿಯಂತ್ರಕ ಲಾವಿಶ್ ಓರ್ಡಿಯಾ ಅವರನ್ನು ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೀದರ್ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್ ಅವರನ್ನು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಐಎಫ್‍ಎಸ್: ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಕಾನೂನು ಘಟಕ) ಲಿಂಗರಾಜ ಎಸ್.ಎಸ್. ಅವರನ್ನು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.