ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಬೋಧ್ ಯಾದವ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ಜಿ.ಖುಷ್ಬೂ ಚೌಧರಿ ಅವರನ್ನು ಕೈಗಾರಿಕೆ ಅಭಿವೃದ್ಧಿ ಇಲಾಖೆಯ ಆಯುಕ್ತೆ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಅಲ್ಲದೆ, ಖುಷ್ಬೂ ಜಿ. ಚೌಧರಿ ಅವರಿಗೆ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ಹಾಗೂ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಪ್ರೀತಿ ಗೆಹ್ಲೋಟ್ ಅವರನ್ನು ಆರ್ಥಿಕ ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕಿಯಾಗಿ ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ.