ಬೆಂಗಳೂರು : ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)ರಾಗಿದ್ದ ಲತಾ ಆರ್. ಅವರನ್ನು ರಾಜ್ಯ ವಸತಿ ಮಂಡಳಿಯ ಆಯುಕ್ತರನ್ನಾಗಿ, ರಾಜ್ಯ ವಸತಿ ಮಂಡಳಿಯ ಆಯುಕ್ತ ದಯಾನಂದ ಕೆ.ಎ. ಅವರನ್ನು ಹಿಂದುಳಿದ ವರ್ಗಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ತೋಟಗಾರಿಕೆ ಇಲಾಖೆಯ ನಿರ್ದೇಶಕ ಇಬ್ರಾಹೀಂ ಮೈಗೂರ್ ಅವರನ್ನು ಕಬ್ಬು ಅಭಿವೃದ್ಧಿ ಆಯುಕ್ತ ಹಾಗೂ ಸಕ್ಕರೆ ನಿರ್ದೇಶಕರಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ಮ್ಯಾಜೇಸ್ಟ್ರೇಟ್(ಎಡಿಸಿ) ಸಯೀದಾ ಆಯಿಷಾ ಅವರನ್ನು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದಲ್ಲದೆ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕೃಷ್ಣ ಬಾಜಪೈ ಅವರನ್ನು ರಾಜ್ಯ ಮೇಲ್ಮನವಿ ಪ್ರಾಧಿಕಾರದ ಸದಸ್ಯರಾಗಿ, ಅರ್ಚನಾ ಎಂ.ಎಸ್. ಅವರನ್ನು ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ, ವೆಂಕಟ ರಾಜ ಅವರನ್ನು ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ವೆಂಕಟೇಶ್ ಟಿ. ಅವರನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ, ಮೋನಾ ರೋಟ್ ಅವರನ್ನು ಬೆಂಗಳೂರು ಉತ್ತರ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ(ಅಭಿವೃದ್ಧಿ)ಯಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor