ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
Update: 2023-08-02 22:58 IST
ಬೆಂಗಳೂರು, ಆ.2: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಇಲಾಖೆಯ ನಿರ್ದೇಶಕ(ತಾಂತ್ರಿಕ) ಎ.ಬಿ.ಬಸವರಾಜು ಅವರನ್ನು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಕಂದಾಯ ಇಲಾಖೆಯ ಆಯುಕ್ತ(ಕಂದಾಯ, ಭೂ ಸ್ವಾಧೀನ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಮತ್ತು ಸಾಮಾಜಿಕ ಭದ್ರತೆ) ಪೊಮ್ಮಲ ಸುನೀಲ್ ಕುಮಾರ್ ಅವರನ್ನು ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ವಿಭಾಗದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.