ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
Update: 2026-07-24 19:47 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದು, ಕೆಎಸ್‍ಎಂಎಸ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ರತ್ನಂ ಪಾಂಡೆ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
ಇದಲ್ಲದೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತ ರವಿ ಕುಮಾರ್ ಎಂ.ಆರ್. ಅವರನ್ನು ಕೋಲಾರ ಜಿಲ್ಲಾಧಿಕಾರಿ ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಎ.ಆರ್. ರವಿ ಅವರನ್ನು ಕೆಎಸ್‍ಎಂಎಸ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.