×
Ad

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪ್ರಶಾಂತ್ ಕುಮಾರ್ ಮಿಶ್ರಾ ನೇಮಕ

Update: 2023-07-23 23:16 IST

ಬೆಂಗಳೂರು, ಜು.23: ಪವನ್ ಕುಮಾರ್ ಮಾಲಪತಿ ಸೇರಿ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪವನ್ ಕುಮಾರ್ ಮಾಲಪತಿ ಅವರನ್ನು ಬೆಂಗಳೂರು ಗ್ರಾಮೀಣಾಭಿವೃದ್ಧಿ ಕಮಿಷನರ್ ಆಗಿ ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಹುದ್ದೆಯ ನಿರೀಕ್ಷೆಯಲ್ಲಿದ್ದ ರಮೇಶ್ ಕೆ.ಎನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಬಳ್ಳಾರಿ ಡಿಸಿ ನೇಮಕ : ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಬಳ್ಳಾರಿ ಜಿಲ್ಲೆಯ ಡೆಪ್ಯೂಟಿ ಕಮಿಷನರ್ ಆಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News