×
Ad

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2024-10-08 20:17 IST

ಬೆಂಗಳೂರು : ರಾಜ್ಯ ಸರಕಾರವು ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆ ಹಾಗೂ ಇಬ್ಬರನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಆಯುಕ್ತ ಕೆ.ಶ್ರೀನಿವಾಸ್ ಅವರಿಗೆ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರನ್ನು ನೋಂದಣಿ ಮಹಾ ನಿರೀಕ್ಷಕ ಹಾಗೂ ಸ್ಟ್ಯಾಂಟ್ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಜಿ.ಜಗದೀಶ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News