×
Ad

ವರ್ಗಾವಣೆ ಆಗದಿದ್ದಕ್ಕೆ ಮನನೊಂದು ಶಿಕ್ಷಕಿ ಆತ್ಮಹತ್ಯೆ

Update: 2023-07-15 19:09 IST

ಬೆಂಗಳೂರು, ಜು.15: ಇಲ್ಲಿನ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಗಾವಣೆ ಆಗದಿದ್ದಕ್ಕೆ ಮನನೊಂದು ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಎನ್.ಟಿ. ಜ್ಯೋತಿ(40) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ ಎಂದು ಗುರುತಿಸಲಾಗಿದೆ.

ದೊಡ್ಡಬಳ್ಳಾಪುರದ ತುರವನಹಳ್ಳಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಜ್ಯೋತಿ, ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದರು. ಆದರೆ ವರ್ಗಾವಣೆ ಆಗದ ಕಾರಣಕ್ಕೆ ಮನನೊಂದು ರೂಮಿನ ಕಿಟಿಕಿಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ ಎಂದು ಗೊತ್ತಾಗಿದೆ. 

ಈ ಸಂಬಂಧ ಪತಿ ವಿರೂಪಾಕ್ಷ ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News