×
Ad

'ಶಕ್ತಿ’ ಯೋಜನೆಯಿಂದ ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ: ಸಚಿವ ರಾಮಲಿಂಗಾರೆಡ್ಡಿ

Update: 2023-06-25 19:00 IST

ಬೆಂಗಳೂರು, ಜೂ. 25: ‘ಶಕ್ತಿ’ ಯೋಜನೆ ಜಾರಿಗೆ ಹಿನ್ನೆಲೆ ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆ ಶಕ್ತಿಯುತವಾಗಿದೆ. ಶಕ್ತಿ ಯೋಜನೆಯಲ್ಲಿ ಕೆಲ ಸಣ್ಣಪುಟ್ಟ ದೋಷಗಳಿವೆ. ಆದರೆ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆ ಹೋದವರು ಮತ್ತೆ ಹೋಗುವುದಿಲ್ಲ, ಎಲ್ಲ ಸರಿಹೋಗಲಿದೆ ಎಂದರು.

ಸಾರಿಗೆ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕಾಗುತ್ತದೆ. ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ಸಿಬ್ಬಂದಿಗೆ ಸಹಕಾರ ನೀಡುವಂತೆಯೂ ಮನವಿ ಮಾಡಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News