×
Ad

ವಿವಾದಾತ್ಮಕ ಭಾಷಣ: ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧದ ವಿಚಾರಣೆಗೆ ತಡೆ

Update: 2025-06-10 21:49 IST

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್

ಬೆಂಗಳೂರು: 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ವಿವಾದಾತ್ಮಕ ಭಾಷಣ ಸಂಬಂಧ ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಬಂಟ್ವಾಳ ಠಾಣಾ ಪೊಲೀಸರು ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಮಂಗಳೂರಿನ ಕಲಡ್ಕದಲ್ಲಿ ರಾಜೇಶ್ ನಾಯ್ಕ್ ಪರ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದ ಸುನಿಲ್ ಕುಮಾರ್, ‘ರಾಮ ಬೇಕೋ, ಅಲ್ಲಾ ಬೇಕೋ? ಎಂದು ಪ್ರಶ್ನೆ ಮಾಡಿದ್ದರು. ಈ ಕುರಿತು ಎಫ್‌ಐಆರ್ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಬಂಟ್ವಾಳ ಪೊಲೀಸರು ಇತ್ತೀಚೆಗೆ ಆರೋಪ ಪಟ್ಟಿ ದಾಖಲಿಸಿ ವಿಚಾರಣೆ ಪ್ರಾರಂಭಿಸಿದ್ದರು. ಇದಕ್ಕೆ ತಡೆ ನೀಡುವಂತೆ ಸುನಿಲ್ ಕುಮಾರ್ ಪರ ವಕೀಲ ಮಹೇಂದ್ರ ಹೈಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ನ್ಯಾಯಾಲಯ ತಡೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News