×
Ad

ತುಮಕೂರು: ಒಂದೇ ಕುಟುಂಬದ ಮೂವರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ

Update: 2023-10-02 13:46 IST

ತುಮಕೂರು:  ಒಂದೇ ಕುಟುಂಬದ ಮೂವರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಸಮೀಪದ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮರಳೂರು ನಿವಾಸಿಗಳಾದ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ ಪುತ್ರಿ ಗೀತಾ (33) ಎಂದು ಗುರುತಿಸಲಾಗಿದೆ.

ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಕೆಸಿ

ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಸಾಲಬಾಧೆ ತಾಳಲಾರದೆ ಸೋಮವಾರ ಬೆಳಗಿನ ಜಾವ ಆಟೋದಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News