×
Ad

ರಾಹುಲ್ ಗಾಂಧಿ ವಿರುದ್ಧ ಟ್ವೀಟ್: ಅಮಿತ್ ಮಾಳವೀಯ ವಿರುದ್ಧದ ತನಿಖೆಗೆ ಹೈಕೋರ್ಟ್‍ನಿಂದ ತಡೆ

Update: 2023-07-19 22:18 IST

ಬೆಂಗಳೂರು, ಜು.19: ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಟ್ವೀಟ್‍ರ್‍ನಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದು ಪಡಿಸುವಂತೆ ಕೋರಿ ಅಮಿತ್ ಮಾಳವೀಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

ಅರ್ಜಿದಾರರ ಹೇಳಿಕೆಯಿಂದ ಯಾವುದೇ ರೀತಿಯಲ್ಲಿಯೂ ಸಮಾಜದಲ್ಲಿ ಗೊಂದಲವನ್ನುಂಟು ಮಾಡುವಂತಹ ಅಂಶ ಇಲ್ಲ. ಹೀಗಾಗಿ ಪ್ರಕರಣದ ವಿಚಾರಣೆ ಮುಂದುವರೆದಲ್ಲಿ ಕಾನೂನಿನ ದುರ್ಬಳಕೆ ಮಾಡಿಕೊಂಡಂತಾಗುತ್ತದೆ ಎಂದು ಅಭಿಪ್ರಾಯಪಟ್ಟು ತನಿಖೆಗೆ ತಡೆ ನೀಡಿ ಆದೇಶಿಸಿದೆ.

ಅಲ್ಲದೆ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News