×
Ad

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ ಸೇರಿ ಹನ್ನೆರಡು ವಿಧೇಯಕಗಳ ಮಂಡನೆ

Update: 2025-12-10 20:26 IST

ಬೆಳಗಾವಿ (ಸುವರ್ಣ ವಿಧಾನಸೌಧ): 2025ನೆ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ (ತಿದ್ದುಪಡಿ) ವಿಧೇಯಕ ಸೇರಿದಂತೆ 12 ವಿಧೇಯಕವನ್ನು ಒಂದೇ ದಿನ ಒಂದೇ ಬಾರಿಗೆ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಬುಧವಾರ ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ ಹಾಗೂ 2025ನೆ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕಗಳನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಡಿಸಿದರು. ಬಳಿಕ ವಿಧೇಯಕದ ಪ್ರಸ್ತಾವವು ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು.

2025ನೆ ಸಾಲಿನ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ.

2025ನೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ಎರಡನೇ ತಿದ್ದುಪಡಿ) ವಿಧೇಯಕ.

2025ನೆ ಸಾಲಿನ ಬಯಲುಸೀಮೆ ಪ್ರದೇಶಾಭಿವೃಧ್ಧಿ ಮಂಡಲಿ (ತಿದ್ದುಪಡಿ) ವಿಧೇಯಕ, 2025 ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ (ತಿದ್ದುಪಡಿ) ವಿಧೇಯಕಗಳನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದರು. ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ವಿಧೇಯಕ ಮಂಡನೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News