×
Ad

ವಿರಾಜಪೇಟೆ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶ

Update: 2023-07-04 13:14 IST

ಪೊನ್ನಣ್ಣ, ಲೋಹಿತ್

ಮಡಿಕೇರಿ ಜು.4 : ವಿರಾಜಪೇಟೆ ಗ್ರಾಮಾಂತರ ಪೆÇಲೀಸ್ ಠಾಣೆ ಸರಹದ್ದಿನ ಅಮ್ಮತ್ತಿಯ ಶ್ರೀ ಮುತ್ತಪ್ಪ ದೇವಾಲಯ ವ್ಯಾಪ್ತಿಯ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಆರೋಪಿಗಳನ್ನು ಅಮ್ಮತ್ತಿ ನಿವಾಸಿ ಎನ್.ಎ.ಪೆÇನ್ನಣ್ಣ (46) ಹಾಗೂ ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ಹೆಚ್.ಆರ್.ಲೋಹಿತ್ (26) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 104 ಗ್ರಾಂ ಗಾಂಜಾ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ಮೊಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರಪ್ಪ, ಪಿಎಸ್ಐ ಮಂಜುನಾಥ.ಸಿ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾದಕ ವಸ್ತು ಮಾರಾಟದ ಕುರಿತು ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News