×
Ad

ಜಿಂಕೆ ಮಾಂಸ ಹೊಂದಿದ ಆರೋಪ; ಇಬ್ಬರ ಬಂಧನ

Update: 2023-10-31 15:00 IST

ಚಾಮರಾಜನಗರ.ಅ.31: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಜಿಂಕೆಯ ಹಸಿ ಮಾಂಸವನ್ನು ಹೊಂದಿದ್ದಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿರುವ ಘಟನೆ ನಡೆದಿದೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಬೂದಿಪಡಗದಲ್ಲಿ ಜಿಂಕೆ ಮಾಂಸ ಇರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಜೆ.ಕ೦ಟ್ರಾಕ್ಟರ್ ಮಾರ್ಗದರ್ಶನದಲ್ಲಿ ಎಸಿಎಫ್ ಸುರೇಶ್ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ನಿಸಾರ್ ಅಹಮ್ಮದ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಂಗರಾಜು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜಿಂಕೆ ಮಾಂಸ ಹೊಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿತರಿಂದ ಜಿಂಕೆಯ ಹಸಿ ಮಾಂಸ ವಶಪಡಿಸಿಕೊಂಡಿದ್ದು ಈ ಸಂಬಂಧ ವನ್ಯಜೀವಿ ಪ್ರಕರಣ ದಾಖಲಿಸಿದ್ದು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ತನಿಖಾ ಕಾರ್ಯ ಪ್ರಗತಿಯಲ್ಲಿದ್ದು ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಬಲೆ ಬೀಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News