×
Ad

ಕೆಎಸ್ಸಾರ್ಟಿಸಿಗೆ ಎರಡು ರಾಷ್ಟ್ರೀಯ ಪ್ರಶಸ್ತಿ

Update: 2024-02-10 20:09 IST

ಬೆಂಗಳೂರು: ಕಾರ್ಮಿಕ ಕಲ್ಯಾಣ ಉಪಕ್ರಮ ಮತ್ತು ಶಕ್ತಿ ಯೋಜನೆ ಜಾರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ)ಗೆ ಹೊಸದಿಲ್ಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಿದೆ.

ದಿಲ್ಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞರ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003ರಿಂದ ‘ಸ್ಕಾಚ್ ಪ್ರಶಸ್ತಿ’ಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ.

ಶನಿವಾರದಂದು ಸ್ಕಾಚ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಮೀರ್ ಕೊಚ್ಚರ್ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಿದರು. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಿಗಮದ ಉಪ ಮುಖ್ಯಲೆಕ್ಕಾಧಿಕಾರಿ ವೈ.ಕೆ.ಪ್ರಕಾಶ್ ಪ್ರಶಸ್ತಿಯನ್ನು ಸ್ವೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News