×
Ad

ಹಿರಿಯ ನಟಿ ಉಮಾಶ್ರೀಗೆ ‘ಡಾ.ರಾಜ್‍ಕುಮಾರ್ ಪ್ರಶಸ್ತಿ’

ಕಿರುಚಿತ್ರ ಪ್ರಶಸ್ತಿ, ಡಾ.ವಿಷ್ಣುವರ್ಧನ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಯಾರಿಗೆ?

Update: 2025-10-30 21:16 IST

ನಟಿ ಉಮಾಶ್ರೀ

ಬೆಂಗಳೂರು : ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗೆ ನೀಡುವ ಡಾ.ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿ, ವಾರ್ಷಿಕ ಸಾಹಿತ್ಯ ಮತ್ತು ಕಿರುಚಿತ್ರ ಪ್ರಶಸ್ತಿಗಳಿಗೆ 2019ನೇ ಸಾಲಿನ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದ್ದು, ಡಾ.ರಾಜ್‍ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ ಆಯ್ಕೆಯಾಗಿದ್ದಾರೆ.

ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಎನ್.ಆರ್.ನಂಜುಂಡೇಗೌಡ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ರಿಚರ್ಡ್ ಕ್ಯಾಸ್ಟಲಿನೋ ಅವರು ಆಯ್ಕೆಯಾಗಿದ್ದಾರೆ. ಈ ಮೂರು ಪ್ರಶಸ್ತಿಗಳು ತಲಾ 5 ಲಕ್ಷ ರೂ.ನಗದು ಹಾಗೂ 50 ಗ್ರಾಂ ಚಿನ್ನದ ಪದಕ ಒಳಗೊಂಡಿವೆ.

2019ರ ಅತ್ಯುತ್ತಮ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ರಘುನಾಥ ಚ.ಹ ಅವರು ಬರೆದಿರುವ ‘ಬೆಳ್ಳಿ ತೊರೆ’ ಸಿನೆಮಾ ಪ್ರಬಂಧಗಳು ಕೃತಿ ಆಯ್ಕೆಯಾಗಿದೆ. ಅಂಕಿತ ಪುಸ್ತಕವು ಈ ಕೃತಿಯನ್ನು ಪ್ರಕಟಿಸಿದೆ. ಈ ಪ್ರಶಸ್ತಿಯು ಲೇಖಕರಿಗೆ ಹಾಗೂ ಪ್ರಕಾಶಕರಿಗೆ ತಲಾ 20 ಸಾವಿರ ರೂ.ನಗದು ಮತ್ತು 50 ಗ್ರಾಂ ಬೆಳ್ಳಿ ಪದಕ ನೀಡಿ ಗೌರವಿಸಲಾಗುತ್ತದೆ.

2019ರ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಶ್ರೀನಾಥ್ ಎಸ್.ಹಡಗಲಿ ನಿರ್ದೇಶನದ ‘ಗುಳೆ’ ಕಿರುಚಿತ್ರವು ಆಯ್ಕೆಯಾಗಿದೆ. ಮನೋಹರ್ ಎಸ್.ಐಯ್ಯರ್ ನಿರ್ಮಿಸಿರುವ ಈ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ತಲಾ 25 ಸಾವಿರ ರೂ. ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕ ನೀಡಿ ಗೌರವಿಸಲಾಗುತ್ತದೆ.

ನ.3ರಂದು ಮೈಸೂರಿನಲ್ಲಿ ಆಯೋಜಿಸಿರುವ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News