×
Ad

ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆ : ಬಿಎಂಟಿಸಿ ಟ್ರೈನಿ ಚಾಲಕನ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್

Update: 2026-01-02 23:51 IST

ಬೆಂಗಳೂರು, ಜ.2: ರಜೆ ಇಲ್ಲದೆಯೇ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆಯಾಗಲಿದ್ದು, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, ಬಿಎಂಟಿಸಿ ಟ್ರೈನಿ ಚಾಲಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಕ್ರಮವನ್ನು ಎತ್ತಿಹಿಡಿದಿದೆ.

ಟ್ರೈನಿ ಚಾಲಕರಾಗಿದ್ದ ವೆಂಕಟರಾಮಯ್ಯ ಎಂಬಾತನ ವಜಾ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಬಿಎಂಟಿಸಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಹೈಕೋರ್ಟ್ ಆದೇಶ:ಪೂರ್ವಾನುಮತಿ ಮತ್ತು ರಜೆ ಪಡೆಯದೆ ವೆಂಕಟೇಶಯ್ಯ 2016ರ ಡಿಸೆಂಬರ್ 1ರ ನಂತರ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದಾರೆ. ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಶಿಸ್ತು ಪ್ರಾಧಿಕಾರ ವೆಂಕಟೇಶಯ್ಯ ಅವರನ್ನು ಸೇವೆಯಿಂದ ವಜಾಗೊಳಿಸಿದೆ. ಉದ್ಯೋಗ ನಿರ್ವಹಣೆ ಮಾಡುವ ಸಮಯದಲ್ಲಿ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿಕೃತವಾಗಿ ಗೈರಾಗಬಾರದು. ರಜೆಯಿಲ್ಲದೆ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆ ಆಗಲಿದೆ. ದುರ್ನಡತೆಯು ಶಿಸ್ತು ಕ್ರಮವನ್ನು ಸಮರ್ಥಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News