×
Ad

ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ: ಕೆಪಿಸಿಸಿ ಅಧ್ಯಕ್ಷರಿಗೆ 50 ಸಾವಿರ ದಂಡ!

Update: 2023-08-21 19:21 IST

ಬೆಂಗಳೂರು, ಆ.21: ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರಿಗೆ ಬಿಬಿಎಂಪಿ ಅಧಿಕಾರಿಗಳು 50 ಸಾವಿರ ರೂಪಾಯಿ ದಂಡ ವಿಧಿಸಿ, ಗಮನ ಸೆಳೆದಿದ್ದಾರೆ.

ನಗರದ ಕ್ವೀನ್ಸ್ ರಸ್ತೆಯಲ್ಲಿ ಕಾಂಗ್ರೆಸ್ ಕಚೇರಿಯ ರಸ್ತೆ ಬದಿ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ ಜನ್ಮ ದಿನಕ್ಕೆ ಶೋಭ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳ ಭಾವಚಿತ್ರದೊಂದಿಗೆ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.

ಈ ಸಂಬಂಧ ಪರವಾನಗಿ ಪಡೆಯದ ಆರೋಪದಡಿ ಕೆಪಿಸಿಸಿ ಅಧ್ಯಕ್ಷರಿಗೆ 50 ಸಾವಿರ ರೂಪಾಯಿ ದಂಡ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News