×
Ad

ಪೂರ್ಣಗೊಳ್ಳದ ಕೊಡವ ಹೆರಿಟೇಜ್ ಯೋಜನೆ; ಸಚಿವ ಭೋಸರಾಜು ಅಸಮಾಧಾನ

Update: 2023-10-17 17:48 IST

ಮಡಿಕೇರಿ ಅ.17 : ಕೊಡಗು ಜಿಲ್ಲೆಯಲ್ಲಿ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಯೋಜನೆಗಳಿಗೆ ಹಣವಿದ್ದರೂ ಪೂರ್ಣಗೊಳಿಸುತ್ತಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಅವರು ‘ಕೊಡವ ಹೆರಿಟೇಜ್’ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ 3 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಉಳಿದ ಕಾಮಗಾರಿ ಆಗದಿರುವ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗ ಆಗಿರುವ ಕಾಮಗಾರಿಗಳು ಮತ್ತು ಆಗಬೇಕಿರುವ ಕಾಮಗಾರಿ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಂಬಂಧಪಟ್ಟ ಎಂಜಿನಿಯರ್ ಗೆ ಸೂಚಿಸಿದರು.

ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ ಮತ್ತಿತರರು ಹಾಜರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News