×
Ad

ನಾಳೆ(ಎ.23) ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ

Update: 2024-04-22 20:05 IST

ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರ ಹಿನ್ನೆಲೆ ನಾಳೆ(ಎ.23) ಬೆಂಗಳೂರು ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ರೋಡ್ ಶೋ ನಡೆಸಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ಅವರು ರೋಡ್ ಶೋ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಲಿದ್ದಾರೆ.

ನಾಳೆ ಸಂಜೆ 7 ಗಂಟೆಗೆ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಬಳಿಕ 7.30ಕ್ಕೆ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಬೊಮ್ಮನಹಳ್ಳಿ ಸರ್ಕಲ್‍ನಿಂದ ಹೊರಟು ಐಐಎಂಬಿ ಬನ್ನೇರುಘಟ್ಟ ರಸ್ತೆ, ಬಿಳೇಕಹಳ್ಳಿವರೆಗೂ ರೋಡ್ ಶೋ ನಡೆಸಲಿರುವ ಅಮಿತ್ ಶಾ, ರಾತ್ರಿ 8.30ರ ವರೆಗೂ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News