ಯುಟಿ ಖಾದರ್‌/PC : Image by magnific

ಬೆಂಗಳೂರು : ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆಹಾರ ಪದಾರ್ಥಗಳು ದೊರೆಯುವುದನ್ನು ಖಚಿತಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಲ್ಲಿ ವಿಶೇಷ ತಪಾಸಣಾ ಅಭಿಯಾನ ಕೈಗೊಳ್ಳುವಂತೆ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಸ್ವಚ್ಛತೆ ಕಾಪಾಡಲಾಗುತ್ತಿದೆಯೇ, ಬಳಸುವ ಕಚ್ಚಾ ಪದಾರ್ಥಗಳ ಗುಣಮಟ್ಟ ಹೇಗಿದೆ, ಕೃತಕ ಬಣ್ಣಗಳನ್ನು ಬಳಸಲಾಗುತ್ತಿದೆಯೇ ಹಾಗೂ ಆಹಾರ ಪದಾರ್ಥಗಳಲ್ಲಿ ಕಲಬೆರಕೆ ನಡೆಯುತ್ತಿದೆಯೇ ಎಂಬುದರ ಕುರಿತು ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಸ್ವಚ್ಛ ಆಹಾರ ಮಳಿಗೆಗಳು, ಕಲಬೆರಕೆ ಅಥವಾ ಕೃತಕ ಬಣ್ಣಗಳ ಬಳಕೆ ಕಂಡುಬಂದಲ್ಲಿ ಸಾರ್ವಜನಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೇರವಾಗಿ ದೂರು ದಾಖಲಿಸಬಹುದು ಎಂದು ಖಾದರ್ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor