ಯು.ಟಿ.ಖಾದರ್ ಗೆ ಹೆಚ್ಚುವರಿಯಾಗಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಜವಾಬ್ದಾರಿ

Update: 2026-08-12 13:44 IST

ಬೆಂಗಳೂರು, ಆ.12: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಇತ್ತೀಚೆಗೆ ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಮಧ್ಯೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿರುವ ಯು.ಟಿ.ಖಾದರ್ ಅವರಿಗೆ ಹೆಚ್ಚುವರಿಯಾಗಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಜವಾಬ್ದಾರಿ ವಹಿಸಲಾಗಿದೆ.

ಈ ಹಿಂದೆ ಆರೋಗ್ಯ ಸಚಿವರಾಗಿ, ವಿಧಾನಸಭೆಯ ಸ್ಪೀಕರ್ ಆಗಿ ತನ್ನದೇ ಛಾಪು ಮೂಡಿಸಿರುವ ಯು.ಟಿ.ಖಾದರ್ ಅವರು ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಮೊದಲ ಹಂತದಲ್ಲೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಬಳಿಕ ಆರೋಗ್ಯ ಸಚಿವರಾಗಿ ನಿಯುಕ್ತಿಗೊಂಡಿದ್ದರು.

ಈ ಕುರಿತು ಸರಕಾರದ ಅಧಿಕೃತ ಪ್ರಕಟನೆ ಇನ್ನಷ್ಟೇ ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News