×
Ad

ಜನೌಷಧಿ ಕೇಂದ್ರಗಳಲ್ಲಿ ಔಷಧಿಯೇತರ ವಸ್ತುಗಳ ಮಾರಾಟ ಆರೋಪ: ಸಮಗ್ರ ಪರಿಶೀಲನೆಗೆ ಸಚಿವ ಯು.ಟಿ.ಖಾದರ್ ಸೂಚನೆ

Update: 2026-06-20 22:56 IST

ಸಚಿವ ಯು.ಟಿ.ಖಾದರ್ 

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿರುವ ಜನೌಷಧಿ ಕೇಂದ್ರಗಳಲ್ಲಿ ಔಷಧಿಯೇತರ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದಿದೆ. ಜೊತೆಗೆ, ಔಷಧಿ ಕೇಂದ್ರಗಳ ಸಮಸ್ಯೆಗಳು ಕೂಡ ಗಂಭೀರವಾಗಿವೆ. ರಾಜ್ಯಾದ್ಯಂತ ಎಲ್ಲವನ್ನೂ ಸಮಗ್ರವಾಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳಲ್ಲಿ ಮಾರಾಟ ಮಾಡುತ್ತಿರುವ ಔಷಧಿಗಳು ಯಾವ ರೀತಿಯವು?, ಯಾವ ಗುಣಮಟ್ಟ ಹೊಂದಿವೆ?, ಅವುಗಳನ್ನು ಸರಕಾರ ದೃಢೀಕರಿಸಿದೆಯೇ ಎಂಬುದರ ಬಗ್ಗೆ ಪರಿಶೀಲಿಸಬೇಕಿದೆ ಎಂದರು.

ಜನೌಷಧಿ ಕೇಂದ್ರಗಳನ್ನು ಸರಿಯಾದ ಕ್ರಮದಲ್ಲಿ ನಡೆಸುವವರು ಯಾವುದೇ ಆರೋಪ ಮಾಡುತ್ತಿಲ್ಲ. ಸರಿ ಇಲ್ಲದ ಕೇಂದ್ರಗಳ ಮಾಲಕರು ಟೀಕೆ ಮಾಡುತ್ತಿದ್ದಾರೆ. ಅಧಿಕಾರಿಗಳ ತಂಡದ ಪರಿಶೀಲನೆಯ ಬಳಿಕ ಕೇಂದ್ರ ಸರಕಾರಕ್ಕೆ ವರದಿ ನೀಡಿ, ಲೋಪಗಳನ್ನು ಸರಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ಬಹುತೇಕ ಕೇಂದ್ರಗಳು ಸರಿಯಾಗಿ ನಡೆಯುತ್ತಿವೆ. ಕೆಲವು ಕೇಂದ್ರಗಳಲ್ಲಷ್ಟೇ ತೊಂದರೆ ಇದೆ ಎಂದು ಯು.ಟಿ.ಖಾದರ್ ತಿಳಿಸಿದರು.

ಜನೌಷಧಿ ಕೇಂದ್ರಗಳು ಜನ ಸಾಮಾನ್ಯರ ಆರೋಗ್ಯಕ್ಕೆ ಸಂಬಂಧಿಸಿವೆ. ಅಲ್ಲಿ ಏನು ನಡೆಯುತ್ತಿದೆ ಎಂದು ತಿಳಿದುಕೊಂಡು ಕೇಂದ್ರ ಸರಕಾರಕ್ಕೆ ವರದಿ ನೀಡಬೇಕು. ಕೆಲವು ಕಡೆಗಳಲ್ಲಿ ಔಷದಿ ಬಿಟ್ಟು ಮಿಕ್ಕಿದ್ದೆಲ್ಲಾ ಮಾರಾಟ ಮಾಡುತ್ತಿರುವ ದೂರುಗಳು ಬಂದಿವೆ. ಇನ್ನೂ ಕೆಲ ಸಂದರ್ಭದಲ್ಲಿ ಜನೌಷಧಿ ಕೇಂದ್ರಗಳ ಮಾಲಕರು ತಮ್ಮನ್ನು ಭೇಟಿ ಮಾಡಿ, ಸಮಯಕ್ಕೆ ಸರಿಯಾಗಿ ಸ್ಟಾಕ್ ಸಿಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವರ ಸಮಸ್ಯೆಗಳು ಏನು ಎಂದು ಅರಿತುಕೊಳ್ಳಲು ಅಧಿಕಾರಿಗಳು ಜನೌಷಧಿ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಇದು ಯಾವುದೇ ರೀತಿಯ ದಾಳಿ ಅಲ್ಲ.

ಯು.ಟಿ.ಖಾದರ್, ಆರೋಗ್ಯ ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News