×
Ad

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ವಿ.ಸೋಮಣ್ಣ

Update: 2024-10-08 16:47 IST

ಹೊಸದಿಲ್ಲಿ : ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ದಿಯ ಬಗ್ಗೆ ಚರ್ಚೆ ಮಾಡಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ದಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳು. ಬೆಂಗಳೂರು ಸಬ್ ಅರ್ಬನ್ ರೈಲ್ವೆ, ವರ್ತುಲ್ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಪ್ರಧಾನಮಂತ್ರಿಗಳಿಗೆ ವಿವರಿಸಿದ್ದಾರೆ.

ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು ರಾಯದುರ್ಗ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆಯನ್ನು ಕೇವಲ 3 ತಿಂಗಳ ಅವಧಿಯಲ್ಲಿ ಶೇ.90ಕ್ಕಿಂತಲೂ ಮಿಗಲಾಗಿ ಮುಗಿಸಿರುವ ಕುರಿತು ಪ್ರಧಾನ ಮಂತ್ರಿಗಳ ಗಮನಕ್ಕೆ ತಂದರು.

ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ರೂ.87 ಕೋಟಿ ಅನುದಾನ ನೀಡಿದ್ದು, ಈ ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ್ ಸ್ವಾಮಿಜಿಯವರ ಹೆಸರು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.

ತುಮಕೂರು – ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಪ್ರಧಾನಿ ಮೋದಿ ಅವರಲ್ಲಿ ಕೇಂದ್ರ ಸಚಿವ ಸೋಮಣ್ಣ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News