×
Ad

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ : ಬಿ.ನಾಗೇಂದ್ರ ಬ್ಯಾಂಕ್ ವಹಿವಾಟಿನ ಬಗ್ಗೆ ಈ.ಡಿ. ವಿಚಾರಣೆ

Update: 2024-07-14 18:19 IST

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿನ ವಹಿವಾಟಿನ ವಿವರಗಳನ್ನು ಜಾರಿ ನಿರ್ದೇಶನಾಲಯ(ಈ.ಡಿ.) ಅಧಿಕಾರಿಗಳು ಪಡೆದು ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಬಿ.ನಾಗೇಂದ್ರ ಹಾಗೂ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿನ ಹಿಂದಿನ ಒಂದು ವರ್ಷದ ಹಣದ ವ್ಯವಹಾರದ ವಿವರಗಳನ್ನು ಪಡೆದಿರುವ ಈ.ಡಿ. ಅಧಿಕಾರಿಗಳು, ಅವುಗಳನ್ನು ಮುಂದಿಟ್ಟು ಪ್ರಶ್ನಿಸುತ್ತಿದ್ದಾರೆ. ಆದರೆ, ನಾಗೇಂದ್ರ ಅವರು ಮಾತ್ರ ‘ತನಗೇನು ಗೊತ್ತಿಲ್ಲ, ವಕೀಲರೊಂದಿಗೆ ಮಾತನಾಡಬೇಕು' ಎಂದು ಉತ್ತರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News