×
Ad

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

Update: 2025-12-07 21:25 IST

 ವೆಂಕಟೇಶ್ ಪ್ರಸಾದ್ | PC : PTI

ಬೆಂಗಳೂರು : ರವಿವಾರದಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಗೆಲುವು ಸಾಧಿಸುವ ಮೂಲಕ ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್, ಖಜಾಂಜಿ ಸ್ಥಾನಕ್ಕೆ ಮಧುಕರ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ.

ವೆಂಕಟೇಶ್ ಪ್ರಸಾದ್ ಅವರು ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ. 20 ಸುತ್ತುಗಳ ಮತದಾನ ಎಣಿಕೆ ಪ್ರಕ್ರಿಯೆಯಲ್ಲಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ 749 ಮತಗಳಿಂದ ಗೆಲುವು ಸಾಧಿಸಿದ್ದು, ಕೆ.ಎನ್. ಶಾಂತಕುಮಾರ್ 558 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ನ.24ರಂದು ನಾಮಪತ್ರಗಳ ಪರಿಶೀಲನೆ ನಡೆದಿತ್ತು. ಪರಿಶೀಲನೆಯಲ್ಲಿ ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಶಾಂತಕುಮಾರ್ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಅವರ ನಾಮಪತ್ರ ಸಿಂಧುಗೊಳಿಸಿ, ಡಿ.7ರಂದು ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News