ಸಕಲ ಸರ್ಕಾರಿ ಗೌರವದೊಂದಿಗೆ ಹಿರಿಯ ನಟಿ ಲೀಲಾವತಿ ಅಂತ್ಯಸಂಸ್ಕಾರ
Update: 2023-12-09 17:18 IST
ಬೆಂಗಳೂರು: ಕನ್ನಡ ಚಿತ್ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರನ್ನು ಹಿಂದೂ ಸಂಪ್ರದಾಯದಂತೆ ಬೆಂಗಳೂರು ಗ್ರಾಮಾಂತರ ಪ್ರದೇಶದ ಸೋಲದೇವನಹಳ್ಳಿರುವ ಅವರ ತೋಟದ ಮನೆಯಲ್ಲಿ ನೆರವೇರಿಸಲಾಗಿದೆ.
ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರಿನ ನೆಲಮಂಗಲದ ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ವ್ಯವಸ್ತೆ ಮಾಡಲಾಗಿತ್ತು. ಚಿತ್ರರಂಗದ ಹಲವು ಕಲಾವಿದರು ಸೇರಿದಂತೆ ಪ್ರಮುಖ ರಾಜಕೀಯ ಗಣ್ಯರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದರು.