ಕನ್ನಡದ ಹಿರಿಯ ನಟಿ ಲೀಲಾವತಿ ನಿಧನ: ಗಣ್ಯರಿಂದ ಅಂತಿಮ ನಮನ
Update: 2023-12-09 12:31 IST
Photo: x//@CMofKarnataka
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ್ದಾರೆ. ಬೆಂಗಳೂರಿನ ನೆಲಮಂಗಲದ ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ತೆ ಮಾಡಲಾಗಿದ್ದು, ಚಂದನವನದ ನಟ, ನಟಿಯರು ಹಾಗೂ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಕನ್ನಡ ಚಿರರಂಗದ ಖ್ಯಾತ ಕಲಾವಿದರಾದ ಉಪೇಂದ್ರ , ಶಿವರಾಜ್ ಕುಮಾರ್, ಜಗ್ಗೇಶ್ ಹಾಗೂ ಉಮಾಶ್ರೀ, ಶ್ರುತಿ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕೂಮಾರ್ , ಬಿ.ಎಸ್ ಯಡಿಯೂರಪ್ಪ ಸಹಿತ ಹಲವು ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದರು.