ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ
Update: 2025-07-14 20:50 IST
ವಿಭು ಬಖ್ರು (PC : kannada.barandbench.com)
ಬೆಂಗಳೂರು : ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರಕಾರವು ಇಂದು (ಜು.14) ಅಧಿಕೃತ ಆದೇಶ ಹೊರಡಿಸಿದೆ.
ಇದಲ್ಲದೇ, ಇತರೆ ನಾಲ್ಕು ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಯ ಕುರಿತು ಕೇಂದ್ರ ಸರಕಾರ ದೃಢಪಡಿಸಿದೆ. ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ.