×
Ad

VIDEO | ಹಂಪಿಯಲ್ಲಿ ʻವೀರ ಮಕ್ಕಳ ಕುಣಿತʻಕ್ಕೆ ಹೆಜ್ಜೆ ಹಾಕಿದ ಸಿಎಂ ಸಿದ್ದರಾಮಯ್ಯ

Update: 2023-11-02 23:19 IST

ವಿಜಯನಗರ, ನ.02: ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ ‘ಕರ್ನಾಟಕ ಸಂಭ್ರಮ-50’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. 

ಜೊತೆಗೆ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ ಅವರು, ಮೈಸೂರ ತಂಡದವರು ಪ್ರಸ್ತುತ ಪಡಿಸಿದ ವೀರ ಮಕ್ಕಳ ಕುಣಿತದಲ್ಲಿ ಭಾಗಿಯಾಗಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದಾರೆ.

ಮುಖ್ಯಮಂತ್ರಿಗಳ ವೀರ ಕುಣಿತದ ವೀಡಿಯೊ ಇದೀಗ ಸಾಮಾಜಿ ತಾಣಗಳಲ್ಲಿ ವೈರಲ್​ ಆಗಿದೆ. 

ಈ ಕುರಿತು ಫೇಸ್‌ ಬುಕ್‌ ನಲ್ಲಿ ನೃತ್ಯದ ವೀಡಿಯೊ ಹಂಚಿಕೊಂಡಿರುವ ಸಿದ್ದರಾಮಯ್ಯ, ʻʻಹಂಪಿಯಲ್ಲಿ ಇಂದು ನಡೆದ ಕರ್ನಾಟಕ ಸಂಭ್ರಮ-50 ರ ಉದ್ಘಾಟನಾ ಸಮಾರಂಭದಲ್ಲಿ ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಮೈಮನ ಹಗುರಾಗಿಸಿತು. ಬಾಲ್ಯದಲ್ಲಿ ಕಲಿತ ವಿದ್ಯೆ ಬದುಕಿನುದ್ದಕ್ಕೂ ನೆನಪಿನಲ್ಲುಳಿಯುತ್ತಂತೆ. ಹೆಜ್ಜೆ ಹಾಕುತ್ತಾ ಹಾಕುತ್ತಾ ನನ್ನೂರ ಗೆಳೆಯರೊಡನೆ ಕುಣಿಯುತ್ತಿದ್ದ ಬಾಲ್ಯದ ದಿನಗಳು ನೆನಪಾದವುʻʻ ಎಂದು ಬರೆದುಕೊಂಡಿದ್ದಾರೆ. 

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News