×
Ad

ವಿಧಾನ ಪರಿಷತ್ ಚುನಾವಣೆ: ಆರು ಸ್ಥಾನಗಳಿಗೆ 17 ನಾಮಪತ್ರ ಸಲ್ಲಿಕೆ

Update: 2024-05-13 20:34 IST

ಬೆಂಗಳೂರು: ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಸೋಮವಾರ 17 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಈಶಾನ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸಾಯಿಬಣ್ಣ ಜಮಾದಾರ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News