×
Ad

‌ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ಬಾದರ್ಲಿ ನಾಮಪತ್ರ ಸಲ್ಲಿಕೆ

Update: 2024-06-26 13:18 IST

ಬೆಂಗಳೂರು : ರಾಜ್ಯ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವನಗೌಡ ಬಾದರ್ಲಿ ಅವರು ವಿಧಾನ ಸೌಧದ ಮೊದಲೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 121ರಲ್ಲಿ ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,  ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ್ ಎಸ್.ತಂಗಡಗಿ, ಎನ್‌.ಎಸ್‌.ಭೋಸರಾಜು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News