×
Ad

ಜೆಡಿಎಸ್‌ ಕಚೇರಿ ಮುಂದೆ ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರತ್ಯಕ್ಷ

Update: 2023-11-15 15:53 IST

Photo: twitter.com/360_political

ಬೆಂಗಳೂರು: ಜೆಡಿಎಸ್‌ ಕಚೇರಿ ಮುಂದೆ ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಎಂದು ಬರೆದಿರುವ ಪೋಸ್ಟರ್‌ ಪ್ರತ್ಯಕ್ಷಗೊಂಡಿದೆ.

ಕುಮಾರಸ್ವಾಮಿ ಅವರ ಭಾವಚಿತ್ರವುಳ್ಳ ಪೋಸ್ಟರ್‌ನಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂದು ಬರೆಯಲಾಗಿದೆ. ಅಲ್ಲದೇ 200 ಯೂನಿಟ್ ಉಚಿತ.. ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಮತ್ತೊಂದು ಕಡೆ ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News