×
Ad

ಜಾತಿ ಜನಗಣತಿ | ಮುಖ್ಯಮಂತ್ರಿ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈಹಾಕಿರುವುದು ದುರ್ದೈವ : ವಿಜಯೇಂದ್ರ

Update: 2025-09-22 19:25 IST

ಬಿ.ವೈ.ವಿಜಯೇಂದ್ರ

ಬೆಂಗಳೂರು, ಸೆ.22: ಜಾತಿ ಜನಗಣತಿ ವಿಚಾರ ಈಗಾಗಲೇ ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯದ ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ನಮ್ಮ ನಾಡಿನ ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು, ಸಮಾಜ ಜಾಗೃತವಾಗಿದೆ. ಹಿಂದೂ ಸಮಾಜವೂ ಇನ್ನೂ ಜಾಗೃತಿ ಆಗಬೇಕಿದೆ. ರಾಜ್ಯ ಸರಕಾರಕ್ಕೆ ಜಾತಿ ಜನಗಣತಿ ನಡೆಸುವ ಅಧಿಕಾರ ಇಲ್ಲದಿದ್ದರೂ ಈ ರೀತಿ ಹುಡುಗಾಟಿಕೆ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.

ಜಿಎಸ್‍ಟಿ ಸುಧಾರಣೆ ಮೂಲಕ ಜನಸಾಮಾನ್ಯರಿಗೆ ಪ್ರಯೋಜನ ಲಭಿಸಬೇಕೆಂಬ ಅಪೇಕ್ಷೆ ಪ್ರಧಾನಿ ನರೇಂದ್ರ ಮೋದಿ ಅವರದ್ದು. ಸಣ್ಣಪುಟ್ಟ ಗೊಂದಲ ನಿವಾರಣೆ ಕಡೆ ಕೇಂದ್ರ ಸರಕಾರ ಗಮನ ಹರಿಸಲಿದೆ. ಜಿಎಸ್‍ಟಿ ಸರಳೀಕರಣದ ಲಾಭ ಜನರಿಗೆ ತಲುಪುವ ನಿಟ್ಟಿನಲ್ಲಿ ಅನುಷ್ಠಾನ ಆಗಲಿದೆ ಎಂದು ವಿಜಯೇಂದ್ರ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News