ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ
Update: 2024-07-31 18:07 IST
PC :x/@BYVijayendra
ಹೊಸದಿಲ್ಲಿ : ರಾಜ್ಯ ಸರಕಾರದ ವಿರುದ್ಧದ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದರು.
ಬುಧವಾರ ಹೊಸದಿಲ್ಲಿಯಲ್ಲಿ ಅಮಿತ್‍ಶಾರನ್ನು ಭೇಟಿ ಮಾಡಿದ ವಿಜಯೇಂದ್ರ, ಕಾಂಗ್ರೆಸ್ ಸರಕಾರದ ವಿರುದ್ಧದ ಹಗರಣಗಳ ಮಾಹಿತಿಯನ್ನು ನೀಡಿದರಲ್ಲದೆ, ಈ ಸಂಬಂಧ ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಮಾಡಿರುವ ಹೋರಾಟದ ಬಗ್ಗೆಯೂ ವಿವರಣೆ ನೀಡಿದರು. ಅಲ್ಲದೆ, ಬೆಂಗಳೂರಿನಿಂದ ಮೈಸೂರು ವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯ ವಿವರವನ್ನು ನೀಡಿದರು. ಇದಲ್ಲದೆ, ರಾಜ್ಯದಲ್ಲಿ ಬಿಜೆಪಿ ಪಕ್ಷದ ಸಂಘಟನೆ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು.