ಯೋಗೀಶ್‌ ಗೌಡ ಕೊಲೆ ಪ್ರಕರಣ; ನಾಳೆ(ಜು.31) ವಿನಯ್‌ ಕುಲಕರ್ಣಿ ಜಾಮೀನು ಭವಿಷ್ಯ ನಿರ್ಧಾರ

Update: 2026-07-30 21:04 IST

ಬೆಂಗಳೂರು : ಧಾರವಾಡದ ಬಿಜೆಪಿ‌ ಮುಖಂಡ ಯೊಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ಭವಿಷ್ಯ ಶುಕ್ರವಾರ ‌ನಿರ್ಧಾರವಾಗಲಿದೆ.

ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡುವಂತೆ ಕಾಂಗ್ರೆಸ್ ಮುಖಂಡ ವಿನಯ್‌ ಕುಲಕರ್ಣಿ ಹಾಗೂ ಇತರರು ಸಲ್ಲಿಸಿದ್ದ ಮಧ್ಯಂತರ‌‌ ಅರ್ಜಿ ಕುರಿತ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹೈಕೋರ್ಟ್ ಶುಕ್ರವಾರ (ಜುಲೈ 31) ಪ್ರಕಟಿಸಲಿದೆ.

ಅರ್ಜಿದಾರರ ಮಧ್ಯಂತರ ಮನವಿ ಕುರಿತು ಜುಲೈ 9ರಂದು ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ ಅವರಿದ್ದ ವಿಭಾಗೀಯ ತೀರ್ಪು ಕಾಯ್ದಿರಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News