×
Ad

ಕೊಡಗು: ಹೋಂಸ್ಟೇಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿ ಪೊಲೀಸ್ ವಶ

Update: 2023-07-03 21:43 IST

ಮಡಿಕೇರಿ ಜು.3: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಲ್ವತ್ತೋಕ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳೆ ನಡೆಸಿದ ಪೊಲೀಸರು ಸ್ಥಳೀಯ ನಿವಾಸಿ ಅಕ್ಷಯ್ (28) ಎಂಬುವವನನ್ನು 130 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳೊಂದಿಗೆ ಬಂಧಿಸಿದರು.

ವಿರಾಜಪೇಟೆ ಉಪವಿಭಾಗದ ಡಿವೈಎಸ್‍ಪಿ ಆರ್.ಮೋಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರಪ್ಪ, ಪಿಎಸ್‍ಐ ಮಂಜುನಾಥ ಸಿ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News