×
Ad

ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿರುವುದರಿಂದ ಮಂತ್ರಿಯಾಗುವ ಆಸೆಯೂ ಇದೆ: ಶಾಸಕ ಶಿವಲಿಂಗೇಗೌಡ

Update: 2025-02-24 19:32 IST

ಶಾಸಕ ಕೆ.ಎಂ. ಶಿವಲಿಂಗೇಗೌಡ

ಬೆಂಗಳೂರು: ನಾನು ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿರುವುದರಿಂದ ಮಂತ್ರಿಯಾಗುವ ಆಸೆಯೂ ಇದೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಬಾರಿ ನಾನು ಶಾಸಕನಾಗಿದ್ದೇನೆ. ಈಗ ಮಂತ್ರಿಯಾಗುವ ಆಸೆ ಇದೆ. ಪಕ್ಷದ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಎರಡನೇ ಅವಧಿಯಲ್ಲಿ ತನಗೆ ಸಚಿವ ಮಾಡುವ ಭರವಸೆ ನೀಡಿದ್ದಾರೆ ಎಂದರು.

ಸಚಿವ ಸಂಪುಟ ಪುನಾರಚನೆ ಮಾಡುವುದನ್ನು ಕಾಯುತ್ತಿದ್ದೇನೆ. ನಾನೇನೂ ಅವಸರಿಸುತ್ತಿಲ್ಲ. ಎರಡನೇ ಅವಧಿಯಲ್ಲಿ ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಕೆ.ಎಂ.ಶಿವಲಿಂಗೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News