×
Ad

ನರೇಂದ್ರ ಮೋದಿ ಎಷ್ಟು ಸಮರ್ಥರು ಎಂದು ಕಳೆದ ಹತ್ತು ವರ್ಷಗಳಿಂದ ನೋಡುತ್ತಿದ್ದೇವೆ: ಪ್ರಿಯಾಂಕ್‌ ಖರ್ಗೆ

Update: 2023-12-20 13:22 IST

ಕಲಬುರಗಿ: 'ನರೇಂದ್ರ ಮೋದಿ ಅವರಿಗೆ ಸ್ಥಾನ ಮಾನ ಕೊಡಬೇಕಾದರೆ ಅವರ ಜಾತಿ ಕೇಳಲಿಲ್ಲ. ಅವರು ಎಷ್ಟು ಸಮರ್ಥರು ಎನ್ನುವುದನ್ನು ಕಳೆದ ಹತ್ತು ವರ್ಷಗಳಿಂದ ನೋಡುತ್ತಿದ್ದೇವೆ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿದರು.

ಪ್ರಧಾನಿ, ಉಪಪ್ರಧಾನ ಮಂತ್ರಿ ಯಾರಾಗಬೇಕು ಎಂಬ ವಿಚಾರ ಬಂದಾಗ ಆ ಸಮಾಜದ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಅವರೂ ಸಮರ್ಥರಲ್ಲವಾ? ಆ ಸಮುದಾಯದಲ್ಲಿರುವವರ  ದಕ್ಷತೆ ನೋಡುವುದಿಲ್ಲವಾ' ಎಂದು ಪ್ರಶ್ನಿಸಿದರು.

ಯಾರು ಪ್ರಧಾನಿ, ಯಾರು ಉಪ ಪ್ರಧಾನಿ ಎಂಬ ಸವಾಲು ನಮ್ಮ ಮುಂದೆ ಇಲ್ಲ. ಆದಷ್ಟು ಹೆಚ್ಚು ಸಂಸದರನ್ನು ಗೆಲ್ಲಿಸಿ ಕಳುಹಿಸುವಂತಹದ್ದು ನಮ್ಮ ಮುಂದೆ ಇರುವ ಸವಾಲು. ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ 200ರಿಂದ 250 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ತಿಗೆ ಕಳುಹಿಸುವುದು ಮುಖ್ಯ ಗುರಿ' ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News