"ಶ್ರೀರಾಮುಲು ಕೊಟ್ಟ ಹಣವನ್ನೇ ಬಿಹಾರಕ್ಕೆ ನೀಡಿದ್ದೇವೆ": ʼ300 ಕೋಟಿ ರೂ. ಕಪ್ಪ ಕಾಣಿಕೆʼ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
Update: 2025-10-29 19:49 IST
ಡಿಸಿಎಂ ಡಿ.ಕೆ. ಶಿವಕುಮಾರ್ (Photo:X/@DKShivakumar)
ಬೆಂಗಳೂರು: "ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಹಣವನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ" ಎಂದು ಬಿಜೆಪಿ ನಾಯಕ ಶ್ರೀರಾಮುಲು ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಹಾರ ಚುನಾವಣೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ 300 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದ್ದರು.
ಈ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, "ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೆ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ" ಎಂದು ಲೇವಡಿ ಮಾಡಿದರು.