×
Ad

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಮುಂದುವರಿಸಿದರೆ ಹೊಸ ಪಕ್ಷ ಕಟ್ಟುತ್ತೇವೆ: ಶಾಸಕ ಯತ್ನಾಳ್

Update: 2025-07-17 20:07 IST

 ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ‘ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸಿದರೆ ನಾವು ಹೊಸ ಪಕ್ಷವನ್ನು ಕಟ್ಟುತ್ತೇವೆ’ ಎಂದು ಬಿಜೆಪಿಯಿಂದ ಉಚ್ಚಾಟಿತರಾಗಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾವು ಹೊಸ ಪಕ್ಷ ಕಟ್ಟುವ ಬಗ್ಗೆ ಸಂಶಯ ಬೇಡ. ಹಿಂದುತ್ವ ಮತ್ತು ಅಭಿವೃದ್ಧಿ ಆಧಾರದ ಮೇಲೆ ಹೊಸ ಪಕ್ಷ ಕಟ್ಟುತ್ತೇವೆ. ನಮ್ಮ ಪಕ್ಷಕ್ಕೆ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಂದ ಬರುತ್ತಾರೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ನಾವು ಆಡಳಿತ ಮಾಡಲಿದ್ದೇವೆ ಎಂದರು.

ಶಿವಮೊಗ್ಗದಲ್ಲಿ ಸಿಗಂದೂರು ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರಬೇಡಿ ಎಂದು ಹೇಳಿದ್ದೇ ಯಡಿಯೂರಪ್ಪ. ‘ನೀವು, ನಿಮ್ಮ ಸಚಿವರೂ ಬರುವುದು ಬೇಡ’ ಎಂದು ಸಿದ್ದರಾಮಯ್ಯಗೆ ಹೇಳಿದ್ದರು. ಏಕೆಂದರೆ ಕೇಂದ್ರದ ಬಿಜೆಪಿ ವರಿಷ್ಠರಿಗೆ ಸಂದೇಶ ರವಾನೆ ಮಾಡಲು ಈ ತಂತ್ರ ಮಾಡಿದ್ದಾರೆ. ಇದೆಲ್ಲವೂ ತಮ್ಮ ನಡುವೆ ಹೊಂದಾಣಿಕೆ ಇಲ್ಲ ಎಂದು ಸೂಚಿಸಲು ಯೋಜನೆ ಎಂದು ಅವರು ದೂರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News